Mysore
19
overcast clouds
Light
Dark

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿ ಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳೊಂದಿಗೆ ತಲಾ 20,000ರೂ. ಬಾಂಡ್ ಮೇಲೆ ಕೋರ್ಟ್ ಜಾಮೀನು ನೀಡಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ