BREAKING NEWS

ಉಡುಪಿ ವಿಡಿಯೋ ಪ್ರಕರಣ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಾಶ್‌ ರೂಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಈಗ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು, ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಖುಷ್ಬು ಸುಂದರ್‌ ನೇತೃತ್ವದ ಮಹಿಳಾ ಆಯೋಗದ ತಂಡ ನಗರಕ್ಕೆ ಭೇಟಿ ನೀಡಲಿದೆ.

ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಟ್ವೀಟ್‌ ಮಾಡಿದ್ದು, ಈ ಪ್ರಕರಣವನ್ನು ನಾವು ಪರಿಗಣಿಸಿದ್ದೇವೆ. ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್‌ ಅವರು ಉಡುಪಿಗೆ ತೆರಳಿ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರೇಖಾ ಶರ್ಮಾ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮ ಟ್ವೀಟ್‌ನಲ್ಲಿ, ಉಡುಪಿಯ ಘಟನೆ ತುಂಬಾ ಸಾಮಾನ್ಯವಾದದ್ದು, ಸರಳವಾದದ್ದಲ್ಲ ಅಥವಾ ಕಣ್ತಪ್ಪಿನಿಂದ ಆಗಿಲ್ಲ. ವಾಶ್ ರೂಂನಲ್ಲಿ ಹಿಂದೂ ಹುಡುಗಿಯ ವಿಡಿಯೋ ರೆಕಾರ್ಡ್‌ ಮಾಡಿ, ಅದನ್ನು ಮುಸ್ಲಿಂ ಹುಡುಗರೊಂದಿಗೆ ಹಂಚಿಕೊಂಡಿದ್ದಾರೆ, ಸಾಮಾಜಿಕ ಮಾಧ್ಯಮದಲ್ಲಿ ಆ ವಿಡಿಯೋವನ್ನು ವೈರಲ್‌ ಮಾಡಿದ್ದಾರೆ. ಅದಕ್ಕೆ 3 ಮುಸ್ಲಿಂ ಹುಡುಗಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಇದು ಹಿಂದೂ ಹುಡುಗಿಯರ ವಿರುದ್ಧ ನಡೆದ ಪೂರ್ವ ನಿಯೋಜಿತ ಕೃತ್ಯವೇ? ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು ಮತ್ತು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು.

lokesh

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

7 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

7 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

7 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

8 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

8 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

14 hours ago