ಮನೆಯಲ್ಲಿ ಟಿವಿ, ಫ್ರಿಡ್ಜ್‌, ಬೈಕ್‌ ಇದ್ರೆ ಬಿಪಿಎಲ್‌ ಕಾರ್ಡ್‌ ರದ್ದು: ಉಮೇಶ್‌ ಕತ್ತಿ

ಬೆಳಗಾವಿ: ಮನೆಯಲ್ಲಿ ಟಿವಿ, ಬೈಕ್‌, ಫ್ರಿಡ್ಜ್‌ ಹೊಂದಿರುವವರು, 5 ಎಕರೆಗಿಂತ ಹೆಚ್ಚಿನ ಜಮೀನು ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಕೂಡಲೇ ಅದನ್ನು ಹಿಂದಿರುಗಿಸುವಂತೆ ಆಹಾರ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು ಬಿಪಿಎಲ್‌ ಕಾರ್ಡ್‌ ಹೊಂದಲು ಸಾಧ್ಯವಿಲ್ಲ. ಇಂತಹ ಬಿಪಿಎಲ್‌ ಕಾರ್ಡ್‌ಗಳನ್ನು ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ದರೆ ನಾವೇ ಸರ್ವೇ ಮಾಡಿ ವಾಪಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

× Chat with us