BREAKING NEWS

Under 19 Worldcup Final: ಭಾರತಕ್ಕೆ 254 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 254 ರನ್‌ಗಳ ಸವಾಲಿನ ಗುರಿ ನೀಡಿದೆ.

16 ರನ್‌ಗಳಿಗೆ ತನ್ನ ಮೊದಲ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ ಆಸ್ಟ್ರೇಲಿಯಾ ತಂಡ ನಂತರ ಕಣಕ್ಕಿಳಿದ ಆಟಗಾರರ ಜವಾಬ್ದಾರಿಯುತ ಆಟದ ನೆರವಿನಿಂದ ಪೈಪೋಟಿಯುತ ರನ್‌ ಕಲೆಹಾಕಿತು. ತಂಡದ ಪರ ಹ್ಯಾರಿ ಡಿಕ್ಸನ್‌ 42, ಸ್ಯಾಮನ್‌ ಕೊನ್‌ಸ್ಟಾಸ್‌ ಡಕ್‌ಔಟ್‌, ನಾಯಕ ಹ್ಯೂ ವಿಬ್‌ಜೆನ್‌ 48, ಹರ್ಜಸ್‌ ಸಿಂಗ್‌ 55, ರ್ಯಾನ್‌ ಹಿಕ್ಸ್‌ 20, ರಾಫ್‌ ಮೆಕ್‌ಮಿಲನ್‌ 2, ಚಾರ್ಲಿ ಆಂಡರ್‌ಸನ್‌ 13, ಟಾಮ್‌ ಸ್ಟಾರ್ಕರ್‌ ಅಜೇಯ 8 ಹಾಗೂ ಓಲಿವರ್‌ ಪೀಕ್‌ ಅಜೇಯ 46 ರನ್‌ ಗಳಿಸಿದರು.

ಭಾರತದ ಪರ ರಾಜ್‌ ಲಿಂಬಾನಿ 3 ವಿಕೆಟ್‌, ನಮನ್‌ ತಿವಾರಿ 2, ಸೌಮಿ ಪಾಂಡೆ ಹಾಗೂ ಮುಶೀರ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago