ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಿರುದ್ಯೋಗವೇ ಭದ್ರತಾ ಲೋಪಕ್ಕೆ ಕಾರಣ” ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಭಾರತೀಯ ಜನಸಂಖ್ಯೆಯು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ ಎಂದು ರಾಹುಲ್ ಗಾಂಧಿ ಹೇಳಿದರು.
“ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಸಂಭವಿಸಿದೆ. ಆದರೆ ಇದು ಏಕೆ ಸಂಭವಿಸಿತು? ಮುಖ್ಯ ವಿಷಯವೆಂದರೆ ನಿರುದ್ಯೋಗ. ಮೋದಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದರು.
ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವರು ಕೇವಲ ಮಾಧ್ಯಮಗಲೊಂದಿಗೆ ಮಾತ್ರ ಮಾತನಾಡುತ್ತಾರೆ. ಸದನದಲ್ಲಿ ಈ ಬಗ್ಗೆ ಏನು ಮಾತನಾಡುವುದಿಲ್ಲ ಎಂದು ಆರೋಪಿಸಿದರು.