Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

Union Budget 2024: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದೇ ನಮ್ಮ ಗುರಿ: ನಿರ್ಮಲಾ ಸೀತಾರಾಮನ್‌

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್‌ ಮಂಡಿಸುತ್ತಿದ್ದಾರೆ. ಮೊದಲಿಗೆ ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಾದ ಬದಲಾವಣೆಗಳ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮ್‌ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮೆಲುಕು ಹಾಕಿದರು.

ದೇಶಕ್ಕೆ ಹೊಸ ದಿಕ್ಕು, ಹೊಸ ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೂ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿದೆ. ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ, ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದೇ ನಮ್ಮ ಗುರಿ ಎಂದೂ ಸಹ ನಿರ್ಮಲಾ ಸೀತಾರಾಮನ್‌ ಉಲ್ಲೇಖಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!