BREAKING NEWS

Union Budget-2024: ನಮ್ಮ ಸರ್ಕಾರಕ್ಕೆ ಈ ನಾಲ್ಕು ಜಾತಿಗಳ ಏಳ್ಗೆ ಮುಖ್ಯ: ವಿತ್ತ ಸಚಿವೆ

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ ಮಾತನಾಡಿರುವ ಅವರು, ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು ಮತ್ತು ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನಿರ್ಮಲಾ ಸೀತರಾಮನ್‌ ಅವರು ಮಾತನಾಡುತ್ತಾ, ನಮ್ಮ ಸರ್ಕಾರ ನಾಲ್ಕು ಜಾತಿಗಳಿಗೆ ಹೆಚ್ಚಿನ ಗಮನ ಕೊಡುತ್ತಿದೆ. ಅವುಗಳೆಂದರೆ ಬಡವರು, ಮಹಿಳೆಯರು, ಯುವಸಮುದಾಯ ಮತ್ತು ರೈತರಾಗಿದ್ದು, ಇವರೇ ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿದ್ದು, ಇವರ ಏಳ್ಗೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. 2047ರ ಒತ್ತಿಗೆ ಭಾರತವನ್ನು ವಿಕಸಿತ ಭಾರತ ಅಥವಾ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

‘ಕಳೆದ 10 ವರ್ಷಗಳಲ್ಲಿ ಪ್ರತಿ ಕುಟುಂಬಕ್ಕೆ ನೀರು, ಗ್ಯಾಸ್, ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಸಾಧನೆಗೆ ಸರ್ಕಾರ ಶ್ರಮಿಸಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿದ್ದೇವೆ. ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ. ಕೇಂದ್ರದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ. ದೇಶದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲಾಗುವುದು. ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು, ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರೆ.

‘ಯುವಕರ ಸಬಲೀಕರಣಕ್ಕೆ ಎನ್​ಇಪಿ ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಕಿಲ್ ಇಂಡಿಯಾ ಮಿಷನ್ ಅಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.

‘ಭಾರತ ವಿಶ್ವದ ಅತಿದೊಡ್ಡ ಹಾಲಿನ ಉತ್ಪಾದಕ ದೇಶವಾಗಿದೆ. ಆದರೆ, ಹಾಲಿನ ಇಳುವರಿ ಬಹಳ ಕಡಿಮೆ. ಈ ಉದ್ಯಮ ಬಲಪಡಿಸಲು ಯೋಜನೆ ಹಾಕಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ ಮಂಡನೆ ವೇಳೆ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

1 hour ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

1 hour ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

2 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

3 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

12 hours ago