ಮಂಡ್ಯ : ರಾಜ್ಯದ ಜೀವನಾಡಿ ಕೆಆರ್ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.
ಸಕ್ಕರೆ ನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹಾರುವ ಲಕ್ಷಣಗಳು ಕಾಣುತ್ತಿಲ್ಲ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಣಣ ತಾಲೂಕಿನ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ನಿನ್ನೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ವೇಳೆ ಮಂಡ್ಯದಲ್ಲಿ ದೊಡ್ಡ ಹೈಡ್ರಾಮವೇ ನಡೆದಿತ್ತು. ರೈತಸಂಘ ಮೂಲ ಸಂಘಟನೆಯ ಕಾರ್ಯಕರ್ತರು ನೂತನ ದಶಪಥ ಹೆದ್ದಾರಿ ತಡೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದರು.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…