ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ. ಆದರೆ, ಇವುಗಳು ಯಾವುವೂ ಪ್ರಯೋಜನ ನೀಡಿಲ್ಲ.
ಈ ಮಧ್ಯೆ, ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಜತೆ ಬಿಗಿಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್, ನನಗೆ ಸಿಎಂ ಆಗಲು ಅವಕಾಶ ನೀಡದಿದ್ದರೆ ನೀವೇ ಆಗಿ ಎಂದು ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.
2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೆವು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಸೋತಿದ್ದೆವು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ. ಒಂದೋ ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ. ರಾಜ್ಯದಲ್ಲಿ ದಲಿತ ಸಿಎಂ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ದಲಿತರು ಸಿಎಂ ಆದರೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಖರ್ಗೆ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸೋನಿಯಾ, ರಾಹುಲ್ ಜತೆ ಚರ್ಚಿಸಿ ನಿರ್ಧಾರ : ಶಿವಕುಮಾರ್ ನಡುವಣ ಸುದೀರ್ಘ ಮಾತುಕತೆ ನಂತರ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ನಿರ್ಧಾರ ಕಾಯ್ದಿರಿಸಲಾಗಿದೆ. ಗಾಂಧಿ ಕುಟುಂಬದ ಜತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ…
ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.…
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು…