BREAKING NEWS

ದೊಡ್ಡಗೌಡರ ಕೋಟೆಗೆ ಇಂದು ಯುಪಿ ಸಿಎಂ ಎಂಟ್ರಿ : ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

ಮಂಡ್ಯ : ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ ಮೋದಿ ಭೇಟಿ ನೀಡಿ ಹವಾ ಎಬ್ಬಿಸಿದ್ದರು. ಈಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡುತ್ತಿದ್ದಾರೆ. ಆ ಮೂಲಕ ಒಕ್ಕಲಿಗ ಮತ ಸೆಳೆಯುವ ಪ್ಲಾನ್ ನಡೆದಿದೆ.

ಹಳೇ ಮೈಸೂರು ಮೇಲೆ ಹೆಚ್ಚು ಫೋಕಸ್ ಮಾಡಿರುವ ಬಿಜೆಪಿ ಈ ಬಾರಿ ಮಂಡ್ಯದಲ್ಲೂ ಎರಡ್ಮೂರು ಕ್ಷೇತ್ರಗಳನ್ನ ಗೆಲ್ಲುವ ಗುರಿ ಹೊಂದಿದೆ. ಅದಕ್ಕಾಗಿಯೇ ರಾಷ್ಟ್ರೀಯ ನಾಯಕರು ಮಂಡ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.

ಇಂದು ಬೆಳಗ್ಗೆ 10:30ಕ್ಕೆ ಮೈಸೂರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್‌, ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ್ ವೃತ್ತದವರೆಗೆ 1 ಕಿ.ಮೀ ರೋಡ್ ಶೋ ಮಾಡಲಿದ್ದಾರೆ. ಸಿಲ್ವರ್ ಜುಬಿಲಿ ಪಾರ್ಕ್ ಬಹಿರಂಗ ಸಭೆಯಲ್ಲಿ ಯೋಗಿ ಭಾಷಣ ಮಾಡುವ ಮೂಲಕ ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಸೇರಿದಂತೆ ಜಿಲ್ಲೆಯ ಏಳು ಅಭ್ಯರ್ಥಿಗಳ ಪರವಾಗಿ ಮತ ಬೇಟೆ ಮಾಡಲಿದ್ದಾರೆ.

ಯೋಗಿ ಆದಿತ್ಯಾನಾಥ್ ಮಂಡ್ಯಕ್ಕೆ ಬಂದ್ರೆ ಒಕ್ಕಲಿಗ ಮತಗಳನ್ನು ಸೆಳೆಯಬಹುದು ಎಂಬುದು ಬಿಜೆಪಿ ಲೆಕ್ಕಚಾರವಿದೆ. ಆದಿಚುಂಚನಗಿರಿ ಕ್ಷೇತ್ರ ಹಾಗೂ ಯೋಗಿ ಆದಿತ್ಯನಾಥ್ ಅವರದ್ದು ನಾಥಪರಂಪರೆ. ಮಂಡ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಚುಂಚನಗಿರಿ ಮಠದ ಭಕ್ತರು ಯೋಗಿ ಬಂದ್ರೆ ಬಿಜೆಪಿ ಪರವಾಲುತ್ತಾರೆಂಬ ನಂಬಿಕೆ. ಅದರಲ್ಲೂ ಒಕ್ಕಲಿಗ ಮತಗಳನ್ನ ಹೆಚ್ಚು ಸೆಳೆಯಬಹುದು. ಇದರಿಂದ ಜೆಡಿಎಸ್‌ಗೆ ಮಾಸ್ಟರ್ ಸ್ಟ್ರೋಕ್ ಕೊಡಬಹುದು ಎಂಬುದು ಬಿಜೆಪಿ ಪ್ಲಾನ್.

ಮಂಡ್ಯ ಕಾರ್ಯಕ್ರಮ ಬಳಿಕ ಸಿಎಂ ಯೋಗಿ ಆದಿತ್ಯನಾಥ್‌ ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಸವನಬಾಗೇವಾಡಿ ಬಿಜೆಪಿ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ ಇಂಡಿ ಬಿಜೆಪಿ ಅಭ್ಯರ್ಥಿ ಕಾಸುಗೌಡಾ ಪಾಟೀಲ ಪರ ಪ್ರಚಾರ ನಡೆಸಲಿದ್ದಾರೆ.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago