BREAKING NEWS

ಪಠ್ಯಕ್ರಮದಲ್ಲಿ ಸಾವರ್ಕರ್ ಪಠ್ಯ ಸೇರ್ಪಡೆ ಮಾಡಿದ ಯುಪಿ ಸರ್ಕಾರ

ಲಖನೌ : ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವರ್ಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ ಕಾಂಗ್ರೆಸ್ ಸರ್ಕಾರ ಇದನ್ನು ಪರಿಷ್ಕರಣೆ ಮಾಡಿದ್ದು ಇತಿಹಾಸ.

ಇದೀಗ ಉತ್ತರ ಪ್ರದೇಶ ಸರ್ಕಾರ ತನ್ನ ಪಠ್ಯಕ್ರಮದಲ್ಲಿ ವಿನಾಯಕ ದಾಮೋದರ್ ಸಾವರ್ಕರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸೇರಿದಂತೆ 50 ಮಹಾನ್ ವ್ಯಕ್ತಿಗಳ ಜೀವನಚರಿತ್ರೆಯನ್ನು ಸೇರಿಸಿದೆ. ಆದರೆ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಹೊರಗಿಡಲಾಗಿದೆ.

ಜುಲೈ ತಿಂಗಳಿನಿಂದ ಯು.ಪಿ. ಶಿಕ್ಷಣ ಮಂಡಳಿಯು ತನ್ನ ವಿದ್ಯಾರ್ಥಿಗಳಿಗೆ ಭಾರತದ 50 ಮಹಾಪುರುಷರ ಜೀವನ ಮತ್ತು ಅವರ ಜೀವನ ಚರಿತ್ರ್ಯೆ ಕುರಿತಾಗಿ ಕಲಿಸಲು ಮುಂದಾಗಿದೆ.

ಎಲ್ಲಾ ವಿದ್ಯಾರ್ಥಿಗಳಿಗೆ ವಿಷಯವು ಕಡ್ಡಾಯವಾಗಿದೆ ಮತ್ತು ಅದರಲ್ಲಿ ಉತ್ತೀರ್ಣರಾಗುವುದು ಅವಶ್ಯಕ ಎಂದು ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೆಹರೂ ಅವರನ್ನು ಹೊರಗಿಡುವ ನಿರ್ಧಾರವನ್ನು ಸಮರ್ಥಿಸಿಕೊಂಡ ಮಾಧ್ಯಮಿಕ ಶಿಕ್ಷಣ ಸಚಿವ ಗುಲಾಬ್ ದೇವಿ, “ನೆಹರೂ ನೆ ದೇಶ್ ಕೆ ಲಿಯೇ ಅಪ್ನೆ ಪ್ರಾಣೋ ಕಿ ಆಹುತಿ ನಹಿ ದಿ ಥಿ (ನೆಹರೂ ಅವರು ದೇಶಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿಲ್ಲ). ಆದ್ದರಿಂದ, 50 ಮಹಾಪುರುಷರ ಜೀವನ ಚರಿತ್ರೆಗಳ ಪಟ್ಟಿಯಿಂದ ನೆಹರೂ ಅವರನ್ನು ಹೊರಗಿಡಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಸಾವರ್ಕರ್ ಅವರನ್ನು ಸೇರ್ಪಡೆ ಮಾಡಿರುವ ಬಗ್ಗೆ , “ನಾವು ನಮ್ಮ ಮಹಾನ್ ನಾಯಕರಾದ ಸಾವರ್ಕರ್ ಮತ್ತು ಪಂ ದೀನ್ ದಯಾಳ್ ಉಪಾಧ್ಯಾಯ ಅವರ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸದಿದ್ದರೆ, ನಾವು ಅವರಿಗೆ ಏನು ಕಲಿಸುತ್ತೇವೆ? ನಮ್ಮ ಮಕ್ಕಳಿಗೆ ಭಾರತದ ಮಹಾನ್ ವ್ಯಕ್ತಿಗಳ ಜೀವನ ಮತ್ತು ಸಮಯದ ಬಗ್ಗೆ ಅರಿವು ಮೂಡಿಸುವ ಬದಲು ಭಯೋತ್ಪಾದಕರ ಬಗ್ಗೆ ಹೇಳಬೇಕೇ?ಮಹಾವೀರ ಸ್ವಾಮಿ, ಭಾರತ ರತ್ನ ಮಹಾಮಾನ ಮದನ್ ಮೋಹನ್ ಮಾಳವೀಯ, ರಾಜಾ ರಾಮ್ ಮೋಹನ್ ರಾಯ್, ಸರೋಜಿನಿ ನಾಯ್ಡು ಮತ್ತು ನಾನಾ ಸಾಹೇಬ್ ಅವರ ಜೀವನ ಚರಿತ್ರೆಗಳನ್ನು ಸಹ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ.ಇದರಲ್ಲಿ ತಪ್ಪೇನು ಎಂದು ಪ್ರಶ್ನೆಸಿದ್ದಾರೆ.

ಈ ವಿಷಯಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ. ಹಾಗೂ ಅದರಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಆದರೆ, ಪ್ರೌಢಶಾಲೆ ಮತ್ತು ಮಧ್ಯಂತರ ಪರೀಕ್ಷೆಗಳ ಅಂಕಪಟ್ಟಿಯಲ್ಲಿ ಅಂಕಗಳನ್ನು ಸೇರಿಸಲಾಗುವುದಿಲ್ಲ ಎಂದು ಯುಪಿ ಬೋರ್ಡ್ ಕಾರ್ಯದರ್ಶಿ ದಿಬ್ಯಕಾಂತ್ ಶುಕ್ಲಾ ಹೇಳಿದ್ದಾರೆ.

ಬಿಜೆಪಿಯೂ 2022 ರ ವಿಧಾನಸಭಾ ಚುನಾವಣೆಗೆ ಬಿಡುಗಡೆಯಾದ ತನ್ನ ಲೋಕ ಕಲ್ಯಾಣ ಸಂಕಲ್ಪ ಪತ್ರದಲ್ಲಿ ಮಹಾಪುರುಷರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೀವನ ಕಥೆಗಳನ್ನು ಶೈಕ್ಷಣಿಕ ಪಠ್ಯಕ್ರಮದಲ್ಲಿ ಸೇರಿಸುವುದಾಗಿ ಭರವಸೆ ನೀಡಿತ್ತು.ಇದಕ್ಕಾಗಿ ಸರ್ಕಾರ ಬಹಳ ದಿನಗಳಿಂದ ಕಸರತ್ತು ನಡೆಸಿತ್ತು.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

55 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago