BREAKING NEWS

ಉಪೇಂದ್ರ, ಮಲ್ಲಿಕಾರ್ಜುನ್ ಪ್ರಕರಣ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು: ಸಚಿವ ಪರಮೇಶ್ವರ್

ಬೆಂಗಳೂರು : ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ್ ವಿರುದ್ಧ ಕೇಳಿ ಬಂದಿರುವ ಜಾತಿ ನಿಂದನೆ ಆರೋಪ ಸಂಬಂಧ ಪರಮೇಶ್ವರ್ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಚುಚ್ಚು ಮಾತುಗಳನ್ನಾಡುವಾಗ ವಿವೇಚನೆ ಇರಬೇಕು. ಇಂತಹ ಹೇಳಿಕೆಗಳನ್ನು ನಾನು ಸಹಿಸಲ್ಲ. ಹೀಗೆ ಮಾತಾಡುವುದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವೇ? ಸಚಿವರೇ ಆಗಲಿ, ಯಾರೇ ಆಗಲಿ ಕಾನೂ‌ನು ಕ್ರಮ ಕೈಗೊಳ್ಳಲಾಗುವುದು. ಉಪೇಂದ್ರ, ಮಲ್ಲಿಕಾರ್ಜುನ್ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ತಮ್ಮ ಹೇಳಿಕೆಯು ಒಂದು ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲವೇ? ಯಾವುದೇ ವ್ಯಕ್ತಿ, ಸಮುದಾಯದವರಿಗೆ ನೋವುಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು ಎಂದು ತಿಳಿಸಿದರು.

ಸಚಿವ ಮಲ್ಲಿಕಾರ್ಜುನ್ ಅವರು ಏನು ಮಾಡಿದ್ದಾರೆಂಬುದು ಗೊತ್ತಿಲ್ಲ. ವೀಡಿಯೊ ನೋಡಿಲ್ಲ. ಅವರ ವಿರುದ್ಧ ದೂರು ದಾಖಲಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದು ಕೀಳಾಗಿ ಮಾತಾಡುವುದು ಸರಿಯಲ್ಲ. ಎರಡೂ ಪ್ರಕರಣಗಳ ಬಗ್ಗೆ ಕಾನೂ‌ನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದರು.

ನಟ ಉಪೇಂದ್ರ ಅವರು ತಮ್ಮ ಪ್ರಜಾಕೀಯ ಪಕ್ಷದ ಆರನೇ ವರ್ಷದ ವಾರ್ಷಿಕೋತ್ಸವದ ಸಂದರ್ಭ ಇನ್​ಸ್ಟಾಗ್ರಾಂ, ಫೇಸ್​ಬುಕ್​ನ ಲೈವ್ ವಿಡಿಯೋದಲ್ಲಿ ಮಾತನಾಡುತ್ತಾ ಆಕ್ಷೇಪಾರ್ಹ ಶಬ್ದವನ್ನು ಬಳಕೆ ಮಾಡಿದ್ದರು, ಇದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಉಪೇಂದ್ರ ವಿರುದ್ಧ ಬೆಂಗಳೂರಿನ ಎರಡು ಪ್ರತ್ಯೇಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಉಪೇಂದ್ರ ಅವರು ಬೇಷರತ್ ಕ್ಷಮೆಯಾಚಿಸಿದ್ದರು.  ಸಮಾಜದ ಯಾವುದೇ ವರ್ಗದ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನನ್ನದಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಬಳಿಕ ಉಪೇಂದ್ರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಈ ವಿವಾದ ಬೆನ್ನಲ್ಲೇ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸಂದರ್ಶನದ ವಿಡಿಯೋವೊಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂದರ್ಶನದಲ್ಲಿ ಮಲ್ಲಿಕಾರ್ಜುನ್‌ ಅವರಿಗೆ ದಾವಣಗೆರೆ ನಗರದ ಅಶೋಕ್‌ ಥಿಯೇಟರ್‌ ಬಳಿ ನಿರ್ಮಾಣಗೊಂಡಿರುವ ಅಂಡರ್‌ ಪಾಸ್‌ ಬಗ್ಗೆ ಅಭಿಪ್ರಾಯ ಕೇಳಲಾಗಿದ್ದು, ಈ ವೇಳೆ ಸಚಿವರು, ಇದನ್ನು ನೀವು ಆ ಸೀದ್ದೇಶ್ವರ್ (ಸಂಸದರು) ಅವರಲ್ಲಿ ಕೇಳಬೇಕು. ಅದು ಅಸಮರ್ಪಕವಾಗಿದೆ. ಈ ಬಗ್ಗೆ ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ʼʼಊರನ್ನು ಹೊಲೆಗೇರಿ ಮಾಡಬೇಡಿʼʼ ಅಂತ ಹೇಳಿದ್ದೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

andolanait

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

3 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago