ಮೈಸೂರು: ಜಯಲಕ್ಷ್ಮಿ ವಿಲಾಸ ಮ್ಯಾನ್ಷನ್ ನ ಜಾನಪದ ವಸ್ತುಸಂಗ್ರಹಾಲಯ ಸಂರಕ್ಷಣಾ ಯೋಜನೆಗೆ US ಮಿಷನ್ ಬೆಂಬಲ ನೀಡಿದೆ. ಈ ಸಂಬಂಧ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಇಂದು ಒಡಂಬಡಿಕೆ ಕಾರ್ಯ ನಡೆಸಲಾಯಿತು.
ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿವಿ, ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಹಾಗೂ ಷಾ ಫೌಂಡೇಶನ್ ಗಳ ಜೊತೆಗೂಡಿ ಜಯಲಕ್ಷ್ಮಿ ವಿಲಾಸ ಅರಮನೆಯ ಸಂರಕ್ಷಣಾ ಕಾರ್ಯ ನಡೆಯಲಿದೆ.
ಪಾರಂಪರಿಕ ಕಟ್ಟಡದ ಸಂರಕ್ಷಣೆ ಕಾರ್ಯಕ್ಕಾಗಿ ನುರಿತ ಪಾರಂಪರಿಕ ತಜ್ಞರು, ಅನುಭವಿಗಳನ್ನು ಒಳಗೊಂಡ ಸಮಿತಿಯನ್ನ ಮೈಸೂರು ವಿವಿ ರಚನೆ ಮಾಡಿದ್ದು, ಸುಮಾರು 5 ರಿಂದ 7 ವರ್ಷಗಳ ಅವಧಿಯಲ್ಲಿ ಸಂರಕ್ಷಣಾ ಕಾರ್ಯ ಮುಗಿಯಲಿದೆ.
ಚೆನ್ನೈನ ಯು ಎಸ್ ಕಾನ್ಸಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯು ಹಾಡ್ಸಜ್ ನೇತೃತ್ವದ ತಂಡ ಹಾಗೂ ಷಾ ಫೌಂಡೇಶನ್ ನ ಹರೀಶ್ ಮತ್ತು ಬೀನಾ ಅವರನ್ನೊಳಗೊಂಡ ತಂಡದ ಜೊತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಒಡಂಬಡಿಕೆ ಮಾಡಿಕೊಂಡರು.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…