ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಮೇಲೆ ಡ್ರೋನ್ ಕ್ಯಾಮೆರಾ ಬಳಸಿ ವೀಡಿಯೋ ಚೀತ್ರೀಕರಣ ಮಾಡಿದ್ದರು.
ಚಿತ್ರೀಕರಣದ ಕೆಲವು ದೃಶ್ಯಗಳನ್ನು ಹಾಗೂ ಕೆಲವು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಯಾವುದೇ ಅನುಮತಿ ಇಲ್ಲದೆ ಅಥವ ಅಧಿಕಾರಿಗಳ ಗಮನಕ್ಕೆ ತರದೆ ಡ್ರೋನ್ ಬಳಸಿದ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಜ.೧೦ರಂದು ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಿರುವ ಗೋಪಾಲಸ್ವಾಮಿ ಬೆಟ್ಟ ವಲಯಾ ಅರಣ್ಯಾಧಿಕಾರಿಗಳ ಕಚೇರಿ, ಅನುಮತಿ ಇಲ್ಲದೆ ಡ್ರೋನ್ ಬಳಕೆ ಮಾಡಿರುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ ೧೯೭೨ ಸೆಕ್ಷನ್ ೨೮,೧(ಬಿ)ರ ಉಲ್ಲಂಘನೆಯಾಗಿದೆ.
ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಸಂಜೆ ೬ಗಂಟೆ ಎಂದು ನಮೂದಿಸಿದ್ದೀರಿ. ಬೆಟ್ಟದ ತಪ್ಪಲಿನಿಂದ ದೇವಾಲಯಕ್ಕೆ ತೆರಳಲು ಸಂಜೆ ೪ಗಂಟೆ ವರೆಗೆ ಮಾತ್ರ ಅನುಮತಿ ಇರುತ್ತದೆ. ಹೀಗಾಗಿ ಈ ವಿಚಾರ ವ್ಯಾಪಕ ಚರ್ಚೆಗೆ ಗುರಿಯಾಗಿದೆ.
ಈ ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಅರಣ್ಯಾಧಿಕಾರಿಗಳು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…