Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಉತ್ತರಪ್ರದೇಶ: ಮನೆಯ ಹೊರಗೆ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಮೊರಾದಾಬಾದ್ : ಉತ್ತರ ಪ್ರದೇಶದ ಸಂಭಾಲ್ ನ ಬಿಜೆಪಿ ನಾಯಕ ಅನುಜ್ ಚೌಧರಿ ಯನ್ನು ಮೊರಾದಾಬಾದ್ ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

34 ವರ್ಷದ ಚೌಧರಿ ತಮ್ಮ ಅಪಾರ್ಟ್ ಮೆಂಟ್ ನ ಹೊರಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಮೂವರು ವ್ಯಕ್ತಿಗಳು ಅನೇಕ ಬಾರಿ ಗುಂಡು ಹಾರಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ಚೌಧರಿಯನ್ನು ಮೊರಾದಾಬಾದ್ ನ ಬ್ರೈಟ್ ಸ್ಟಾರ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಚೌಧರಿ ಅವರು ಸಂಭಾಲ್ ನ ಅಸ್ಮೋಲಿ ಬ್ಲಾಕ್ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

ಹತ್ಯೆಗೆ ರಾಜಕೀಯ ಪ್ರತಿಸರ್ಧಿಗಳು ಕಾರಣ ಎಂದು ಚೌಧರಿ ಅವರ ಕುಟುಂಬ ದೂಷಿಸಿದೆ.

ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ