ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವು ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳನ್ನು ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು.
ಎಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ಪ್ರಣಾಳಿಕೆಯನ್ನು ಖಾಲಿ ಇರುವ ಎಲ್ಲಸ ರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದೇವೆ. ಈಗ ನಾವು ನುಡಿದಂತೆ ನಡೆಯುವ ಜವಾಬ್ದಾರಿ ನಮ್ಮ ಮೇಲೆ ಇದೆ. ಈಗ ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಿಂದ 7,72,225 ಹುದ್ದೆಗಳಿವೆ. ಇದರಲ್ಲಿ 5,16,105 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2,55,900 ಹುದ್ದೆಗಳು ಖಾಲಿಯಿದ್ದು, ಶೇ.33ರಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಹೇಳಿದರು.
75,474 ಹೊರಗುತ್ತಿಗೆ ಇದರಲ್ಲಿ ಸಿ, ಡಿ ಹಾಗೂ ನಿವೃತ್ತಿಯಾಗಿರುವ ಅಕಾರಿಗಳನ್ನು ಇ ಮತ್ತು ಬಿ ಶ್ರೇಣಿಯ ಮೇಲೆ ನೇಮಕ ಮಾಡಿಕೊಳ್ಳುತ್ತೇವೆ. ಒಂದೇ ಹಂತದಲ್ಲಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ. ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು.
ಸರ್ಕಾರಿ ಹುದ್ದೆಗಳು ಖಾಲಿ ಇದ್ದರೆ ಗುಣಮಟ್ಟದ ಕೆಲಸ ನಡೆಯಲು ಸಾಧ್ಯವಿಲ್ಲ. ಅಲ್ಲದೆ ಹೆಚ್ಚುವರಿ ಹುದ್ದೆಗಳನ್ನು ನೀಡುವುದರಿಂದ ಬೇರೆಯವರಿಗೆ ಹೊರೆಯಾಗುತ್ತದೆ. ನಾವು ನುಡಿದಂತೆ ನಡೆಯುತ್ತೇವೆ. ಅದರಂತೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದರು.
ಈ ಹಂತದಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರು, ನಿಮ್ಮ ವ್ಯಾಪ್ತಿಗೆ ಬರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ 5934 ಹುದ್ದೆಗಳು ಖಾಲಿ ಇವೆ ಎಂದು ಸಿದ್ದರಾಮಯ್ಯನವರಿಗೆ ಹೇಳಿದರು.
ಇದಕ್ಕೆ ಕಾಂಗ್ರೆಸ್‍ನ ವೆಂಕಟೇಶ್ ಅವರು ನಿಮ್ಮ ಅಕಾರ ಅವಯಲ್ಲಿ ಭರ್ತಿ ಮಾಡಿದ್ದರೆ ಇಂಥ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎಂದು ತಿರುಗೇಟು ಕೊಟ್ಟರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…