ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ತಾವರ್‌ಚಂದ್ ಗೆಲ್ಹೋಟ್ ಅವರು ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಚ್ಛ ನ್ಯಾಯಾಲಯದ ಹಲವು ನ್ಯಾಯಮೂರ್ತಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯ ನ್ಯಾಯಮೂರ್ತಿಯಾಗಿ ವರಳೆ ಅಧಿಕಾರ ಸ್ವೀಕಾರ





