ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ ಕರೆತಂದಿದ್ದಾರೆ ರಾಮೋಹಳ್ಳಿ ಅರಣ್ಯಾಧಿಕಾರಿಗಳು. ಸದ್ಯ ವರ್ತೂರು ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿದೆ. ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ಅವರ ವಿಚಾರಣೆ ನಡೆಯುತ್ತಿದೆ.
ಈ ಕುರಿತು ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು ಎಂದರು.
ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದರು. ಬಿಗ್ ಬಾಸ್ ತಂಡಕ್ಕೆ ವಿವರಗಳನ್ನು ತಿಳಿಸಿ ಸಂತೋಷ್ ಅವರನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಬಿಗ್ ಬಾಸ್ ಮನೆಯಿಂದ ಕರೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…