BREAKING NEWS

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ​ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ ಕರೆತಂದಿದ್ದಾರೆ ರಾಮೋಹಳ್ಳಿ ಅರಣ್ಯಾಧಿಕಾರಿಗಳು. ಸದ್ಯ ವರ್ತೂರು ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿದೆ. ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ಅವರ ವಿಚಾರಣೆ ನಡೆಯುತ್ತಿದೆ.

ಈ ಕುರಿತು ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು ಎಂದರು.

ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದರು. ಬಿಗ್ ಬಾಸ್ ತಂಡಕ್ಕೆ ವಿವರಗಳನ್ನು ತಿಳಿಸಿ ಸಂತೋಷ್ ಅವರನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಬಿಗ್ ಬಾಸ್ ಮನೆಯಿಂದ ಕರೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

lokesh

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

8 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

9 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

10 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

10 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

10 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

11 hours ago