Categories: BREAKING NEWS

ವರ್ತೂರು ಸಂತೋಷ್‌ಗೆ ಮತ್ತೆ ಸಂಕಷ್ಟ !

ಬೆಂಗಳೂರು : ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ವಿರುದ್ಧ ಎನ್‌ಸಿಆರ್‌ ದಾಖಲಾಗಿದ್ದು, ಇದರಿಂದ ಸಂತೋಷ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇತ್ತೀಚೆಗೆ ಹುಲಿ ಉಗುರು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಹಳ್ಳಿಕಾರ್‌ ಒಡೆಯಾ ಎಂದೇ ಖ್ಯಾತಿ ಪಡೆದಿರುವ ವರ್ತೂರು ಸಂತೋಷ್‌ ವಿರುದ್ಧ ಪ್ರಾಣಿ ದಯಾಸಂಘ ಪ್ರಕರಣ ದಾಖಲಿಸಿದ್ದಾರೆ.

ಸಂತೋಷ್‌ ಸಾಕಿದ್ದ ಹಸುಗಳನ್ನು ಸಾಗಾಣೆ ಮಾಡುವ ವೇಳೆ ನಿಯಮ ಪಾಲಿಸಿಲ್ಲ ಎಂಬ ಕಾರಣದಿಂದ ಪ್ರಾಣಿ ದಯಾ ಸಂಘ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ವರ್ತೂರು ಠಾಣೆಯಲ್ಲಿ ವರ್ತೂರು ಸಂತೋಷ್‌ ವಿರುದ್ಧ ಎನ್‌ಸಿಆರ್‌ ದಾಖಲಿಸಲಾಗಿದೆ.

ಒಂದು ವೇಳೆ ಎನ್‌ಸಿಆರ್‌ ಎಫ್‌ಐಆರ್‌ ಆಗಿ ಬದಲಾದರೆ ವರ್ತೂರು ಸಂತೋಷ್‌ಗೆ ಸಂಕಷ್ಟ ಎದುರಾಗಲಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

22 mins ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

25 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

35 mins ago

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

3 hours ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

3 hours ago