ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.
ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಏ.15ರಂದು ಮಧ್ಯಾಹ್ನ 12ಕ್ಕೆ ಹುಣಸೂರಿನಲ್ಲಿ, ಎಚ್.ಡಿ.ಕೋಟೆ ಕ್ಷೇತ್ರದ ಅಭ್ಯರ್ಥಿ ಅನಿಲ್ ಚಿಕ್ಕಮಾದು ಏ.17ರಂದು ಮಧ್ಯಾಹ್ನ 2ಕ್ಕೆ ಎಚ್.ಡಿ.ಕೋಟೆಯಲ್ಲಿ ಉಮೇದುವಾರಿಕೆ ನೀಡಲಿದ್ದಾರೆ.
ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಏ.19ರಂದು ಮಧ್ಯಾಹ್ನ 2ಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಪಿರಿಯಾಪಟ್ಟಣದ ಅಭ್ಯರ್ಥಿ ಕೆ.ವೆಂಕಟೇಶ್ ಮತ್ತೊಮ್ಮೆ ಏ.17ರಂದು ಮಧ್ಯಾಹ್ನ 2ಕ್ಕೆ ಪಿರಿಯಾಪಟ್ಟಣದಲ್ಲಿ, ನಂಜನಗೂಡು ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಏ.17ರಂದು ಮಧ್ಯಾಹ್ನ 12ಕ್ಕೆ ನಂಜನಗೂಡಿನಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಮಾವಿನಹಳ್ಳಿ ಎಸ್.ಸಿದ್ದೇಗೌಡ ಏ.17ರಂದು ಮಧ್ಯಾಹ್ನ 3ಕ್ಕೆ ಮೈಸೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ, ಕೆ.ಆರ್.ನಗರದ ಅಭ್ಯರ್ಥಿ ಡಿ.ರವಿಶಂಕರ್ ಏ.17ರಂದು ಮಧ್ಯಾಹ್ನ 12ಕ್ಕೆ ಕೆ.ಆರ್.ನಗರದಲ್ಲಿ, ತಿ.ನರಸೀಪುರ ಕ್ಷೇತ್ರದಿಂದ ಡಾ.ಎಚ್.ಸಿ.ಮಹದೇವಪ್ಪ ಏ.20ರಂದು ಮಧ್ಯಾಹ್ನ 12ಕ್ಕೆ ತಿ.ನರಸೀಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ತಿಳಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…