ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ. ಕಳೆದ ಮುರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, 48 ಸಾವಿರ ಕ್ಯೂಸೆಕ್ ನದಿಗೆ ಹರಿದು ಬಿಡಲಾಗಿದೆ. ಮಳೆ ಆರ್ಭಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆಗಳಿಗೆ ರಜೆ ನೀಡಿ ಡಿಡಿಪಿಐ ಪರಮೇಶ್ವರಪ್ಪ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ಘೋಷಿಸಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಮತ್ತು ಹಾಸನ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮಾ ರಜೆ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟೆ ರಜೆ ಘೋಷಿಸಿದ್ದಾರೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿದೆ. ವ್ಯಾಪಕ ಮಳೆ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…