ನವದೆಹಲಿ: ಭಾರೀ ಮಳೆಗೆ ಉತ್ತರ ಭಾರತದಲ್ಲಿ ತತ್ತರಿಸಿದ್ದು, ಕಳೆದ ಮೂರು ದಿನಗಳಲ್ಲಿ 28ಕ್ಕೂ ಹೆಚ್ಚು ಮಂದಿ ಮಳೆ ಅನಾಹುತಕ್ಕೆ ಬಲಿಯಾಗಿದ್ದಾರೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಳೆ ಪೀಡಿತ ರಾಜ್ಯಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಯಮುನಾ ನದಿಯ ನೀರಿನ ಮಟ್ಟದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. ಉತ್ತರ ಭಾರತದಲ್ಲಿ ಹಲವು ನಗರಗಳು ಮತ್ತು ಪಟ್ಟಣಗಳಲ್ಲಿ, ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ
ಪ್ರಧಾನಿ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದು, ದೇಶದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯಿಂದಾದ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಅವರ ಕಚೇರಿ ತಿಳಿಸಿದೆ.
ಸ್ಥಳೀಯ ಆಡಳಿತಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ತಂಡಗಳು ಸಂತ್ರಸ್ತರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಕೆಲಸ ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ವ್ಯಾಪಕ ಹಾನಿ ಮತ್ತು ಅನಾನುಕೂಲತೆ ಉಂಟಾಗಿದೆ. ಭಾರೀ ಮಳೆಯಿಂದ ರಾಜಸ್ಥಾನದ ಅಜ್ಮೀರ್, ಸಿಕರ್ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರಾಜಸ್ಥಾನದ ಸಿಕಾರ್‍ನಲ್ಲಿ ವ್ಯಾಪಕವಾದ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಿಮಾಚಲ ಪ್ರದೇಶದ ಪ್ರವಾಸಿ ಪಟ್ಟಣವಾದ ಮನಾಲಿಯಲ್ಲಿ ಸಿಲುಕಿದ್ದ 20 ಜನರನ್ನು ರಕ್ಷಿಸಲಾಗಿದೆ. ಆದರೆ ಸೋಮವಾರ ಮೂರನೇ ದಿನವೂ ಭಾರೀ ಮಳೆಯಿಂದಾಗಿ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 300 ಮಂದಿ ಸಿಲುಕಿಕೊಂಡಿದ್ದಾರೆ.
ಭಾನುವಾರ ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಮನೆಗಳಿಗೆ ಹಾನಿಯಾಗಿದೆ ಮತ್ತು ಹಲವಾರು ಜನರು ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಇಂದು “ರೆಡ್” ಅಲರ್ಟ್ ಘೋಷಿಸಿದೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಭಾರೀ ಮಳೆಯಲ್ಲಿ, ವಿಶೇಷವಾಗಿ ನದಿಗಳು ಮತ್ತು ನಾಲೆಗಳ ಬಳಿ ಜನರು ಹೋಗಬಾರದು ಮತ್ತು ಮುಂದಿನ 24 ಗಂಟೆಗಳ ಕಾಲ ತೀವ್ರ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಸತತ ಮೂರನೇ ದಿನವಾದ ಸೋಮವಾರ ಭಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹೆಚ್ಚು ಹಾನಿಗೊಳಗಾದ ಸ್ಥಳಗಳಲ್ಲಿನ ಜನರನ್ನು ತಲುಪಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಪಂಜಾಬ್ ಮತ್ತು ಹರಿಯಾಣದ ಹಲವೆಡೆ ಬೆಳಗ್ಗೆಯಿಂದ ಮಳೆಯಾಗುತ್ತಿದೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಗೃಹ, ವಿಪತ್ತು ನಿರ್ವಹಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಮಳೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಾನ್ಸೂನ್ ಮಳೆಯ ನಂತರ ಪಂಜಾಬ್‌ನ ಪಟಿಯಾಲ ಜಿಲ್ಲೆ ಪ್ರವಾಹದಿಂದ ತತ್ತರಿಸುತ್ತಿದ್ದು, ಬಿಕ್ಕಟ್ಟನ್ನು ಎದುರಿಸಲು ಅಧಿಕಾರಿಗಳು, ಸೇನೆಯ ಸಹಾಯವನ್ನು ಕೋರಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…