BREAKING NEWS

ಹಿರಿಯ ನಟ ʼಕರ್ನಾಟಕದ ಕುಳ್ಳʼ ದ್ವಾರಕೀಶ್‌ ನಿಧನ !

ಬೆಂಗಳೂರು : ಹಿರಿಯ ಚಲನಚಿತ್ರ ನಟ ದ್ವಾರಕೀಶ್‌ (81) ನಿಧನರಾಗಿದ್ದಾರೆ.

ನಗರದ ಎಲೆಕ್ಟ್ರಾನಿಕ್‌ ಸಿಟಿಯ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿ ಇಂದು ಕೊನೆ ಉಸಿರೆಳೆದಿದ್ದಾರೆ. ಈ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೂ ದಾಖಲಾಗಿದ್ದರು.

ನಟ,ನಿರ್ಮಾಪಕ,ನಿರ್ದೇಶಕ ಸೇರಿದಂತೆ ಹಲವು ರೀತಿಯಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದರು.

1942ರಲ್ಲಿ ಜನಿಸಿದ ದ್ವಾರಕೀಶ್‌ ಅವರು 1963ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ರಾಜ್‌ಕುಮಾರ್‌ , ವಿಷ್ಟುವರ್ಧನ್‌, ಅಂಬರೀಷ್‌, ಪ್ರಭಾಕರ್‌, ಅನಂತ್‌ನಾಗ್‌, ಶಂಕರ್‌ನಾಗ್‌ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟರೊಂದಿಗೆ ತೆರೆ ಹಂಚಿಕೊಂಡು ಚಿತ್ರ ಪ್ರೇಮಿಗಳ ಮನಗೆಲ್ಲುವ ಮೂಲಕ ಕರ್ನಾಟಕದ ಕುಳ್ಳ ಎಂದೇ ಪ್ರಸಿದ್ಧರಾಗಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago