ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. .
ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್‌ವುಡ್‌ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ.
ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ವಿಚಾರ ಜನರನ್ನು ಗಾಬರಿಗೊಳಿಸುವುದು ಸಾಮಾನ್ಯವಾಗಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ.
ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ತಿಳಿಸಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ವರದಿಯಂತೆ ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…