BREAKING NEWS

ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು:  ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. .

ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್‌ವುಡ್‌ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ವಿಚಾರ ಜನರನ್ನು ಗಾಬರಿಗೊಳಿಸುವುದು ಸಾಮಾನ್ಯವಾಗಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ.

ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ತಿಳಿಸಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವರದಿಯಂತೆ ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

1 hour ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

2 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago