BREAKING NEWS

‘ವಿಘ್ನಸಂತೋಷಿ’ಗಳು : ಲಿಂಗಾಯತ ವಿವಾದದ ಕುರಿತು ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ನಡೆಯುತ್ತಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ”ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ. ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು.” ಎಂದು ಪರೋಕ್ಷವಾಗಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಕಿಡಿ ಕಾರಿದ್ದಾರೆ.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಆದರೆ, ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ ಎಂದು ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದೂ ಮಾತ್ರವಲ್ಲದೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 14 ಭಾನುವಾರ

1 min ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

12 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

12 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

13 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

14 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

14 hours ago