ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿನ ಗ್ರೂಪ್ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಸಿರುವ ಕರ್ನಾಟಕ ತಂಡ ಇಂದು ( ಡಿಸೆಂಬರ್ 1 ) ನಡೆಯುತ್ತಿರುವ ಐದನೇ ಪಂದ್ಯದಲ್ಲಿ ಚಂಢೀಗಡ್ ವಿರುದ್ಧ ಸೆಣಸಾಡುತ್ತಿದೆ.
ವಲ್ಲಭ್ ವಿದ್ಯಾನಗರ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ದೇವದತ್ ಪಡಿಕ್ಕಲ್ ಅಬ್ಬರದ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 299 ರನ್ ಕಲೆಹಾಕಿ ಎದುರಾಳಿ ಚಂಡೀಗಢ್ ತಂಡಕ್ಕೆ ಗೆಲ್ಲಲು 300 ರನ್‌ಗಳ ಸವಾಲಿನ ಗುರಿ ನೀಡಿದೆ.
ಕರ್ನಾಟಕದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಆರ್ ಸಮರ್ಥ್ 5 ರನ್ ಗಳಿಸಿದರೆ, ನಾಯಕ ಮಯಾಂಕ್ ಅಗರ್ವಾಲ್ 19 ರನ್ ಗಳಿಸಿದರು. ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ದೇವದತ್ ಪಡಿಕ್ಕಲ್ 103 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 9 ಬೌಂಡರಿ ಬಾರಿಸುವ ಮೂಲಕ 114 ರನ್ ಗಳಿಸಿದರು. ಇನ್ನುಳಿದಂತೆ ಮನೀಶ್ ಪಾಂಡೆ ಅಜೇಯ 53, ಜಗದೀಶ ಸುಚಿತ್ ಶೂನ್ಯ, ಕೃಷ್ಣಪ್ಪ ಗೌತಮ್ 1 ಹಾಗೂ ಶರತ್ ಬಿ ಆರ್ ಅಜೇಯ 1 ರನ್ ಗಳಿಸಿದರು.
ಚಂಡೀಗಢದ ಪರ ಸಂದೀಪ್ ಶರ್ಮಾ ಹಾಗೂ ಮನ್‌ದೀಪ್ ಸಿಂಗ್ ತಲಾ ಎರಡು ವಿಕೆಟ್ ಪಡೆದರೆ, ಮುರುಗನ್ ಅಶ್ವಿನ್ ಹಾಗೂ ಅರ್ಸ್ಲಾನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…