ಇಂದಿನಿಂದ ( ನವೆಂಬರ್ 23 ) ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆದಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಬರೋಬ್ಬರಿ 222 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 402 ರನ್ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಜಮ್ಮು ಕಾಶ್ಮೀರ 30.4 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲ್‌ಔಟ್ ಆಗಿದೆ.
ಕರ್ನಾಟಕ ಇನ್ನಿಂಗ್ಸ್: ಕರ್ನಾಟಕದ ಪರ ಆರಂಭಿಕರಾಗಿ ಆರ್ ಸಮರ್ಥ್ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್ ಅಗರ್ವಾಲ್ 133 ಎಸೆತಗಳಲ್ಲಿ 157 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿದರೆ, ಮನೀಶ್ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು.
ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.
ಜಮ್ಮು ಕಾಶ್ಮೀರ ಇನ್ನಿಂಗ್ಸ್: ಕರ್ನಾಟಕ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಲು ಮುಂದಾದ ಜಮ್ಮು ಕಾಶ್ಮೀರ ಅಕ್ಷರಶಃ ಮಕಾಡೆ ಮಲಗಿದೆ. ತಂಡದ ಪರ ನಾಯಕ ಶುಭಂ ಕಜುರಿಯಾ, ವಿವ್ರಂತ್ ಶರ್ಮಾ ಹಾಗೂ ಯುಧ್ವೀರ್ ಸಿಂಗ್ ಚರಕ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರರೂ ಸಹ ಎರಡಂಕೆ ರನ್ ಮುಟ್ಟಲಿಲ್ಲ. ಶುಭಂ ಕಜುರಿಯಾ 29 ರನ್ ಕಲೆಹಾಕಿದರೆ, ವಿವ್ರಂತ್ ಶರ್ಮಾ 41 ರನ್ ಬಾರಿಸಿದರು ಹಾಗೂ ಯುಧ್ವೀರ್ ಸಿಂಗ್ ಚರಕ್ 39 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 64 ರನ್ ಬಾರಿಸಿದರು. ಇನ್ನುಳಿದಂತೆ ಕಮ್ರಾನ್ ಇಕ್ಬಾಲ್ 5 ರನ್, ಹೆನನ್ ನಜೀರ್ ಮಲಿಕ್ 2 ರನ್, ಅಬ್ದುಲ್ ಸಮದ್ 2, ಫಜಿಲ್ ರಶೀದ್ 4 ರನ್, ಸಹಿಲ್ ಲೋತ್ರ 13 ರನ್, ಅಬಿದ್ ಮುಸ್ತಕ್ 1 ರನ್, ರಸಿಕ್ ದರ್ ಸಲಾಮ್ ಅಜೇಯ 5 ರನ್ ಹಾಗೂ ಉಮ್ರಾನ್ ಮಲಿಕ್ ಶೂನ್ಯ ಸುತ್ತಿದರು.
ಕರ್ನಾಟಕದ ಪರ ವಿಜಯ್‌ಕುಮಾರ್ ವೈಶಾಖ್ 4 ವಿಕೆಟ್ ಕಬಳಿಸಿದರೆ, ಕೃಷ್ಣಪ್ಪ ಗೌತಮ್ 2, ಜಗದೀಶ ಸುಚಿತ್, ವಾಸುಕಿ ಕೌಶಿಕ್ ಹಾಗೂ ವಿದ್ವತ್ ಕಾವೇರಪ್ಪ ತಲಾ ಒಂದೊಂದು ವಿಕೆಟ್ ಪಡೆದರು.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…