ಇಂದಿನಿಂದ ( ನವೆಂಬರ್ 23 ) ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್ ನಡೆಸಿ 50 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 402 ರನ್ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್ ಮಾಡಿದೆ. ಕರ್ನಾಟಕದ ಪರ ಆರಂಭಿಕರಾಗಿ ಆರ್ ಸಮರ್ಥ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿದ್ದಾರೆ. ಆರ್ ಸಮರ್ಥ್ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್ ಅಗರ್ವಾಲ್ 133 ಎಸೆತಗಳಲ್ಲಿ 157 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 71 ರನ್ ಚಚ್ಚಿದರೆ, ಮನೀಶ್ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು.
ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…