BREAKING NEWS

ಸಮರ್ಥ್‌, ಮಯಾಂಕ್‌ ಶತಕ, 35 ಎಸೆತಕ್ಕೆ 71 ರನ್‌ ಚಚ್ಚಿದ ಪಡಿಕ್ಕಲ್;‌ ಜಮ್ಮು ಕಾಶ್ಮೀರಕ್ಕೆ 403 ರನ್‌ ಗುರಿ

ಇಂದಿನಿಂದ ( ನವೆಂಬರ್‌ 23 ) ವಿಜಯ್‌ ಹಜಾರೆ ಟ್ರೋಫಿ ಆರಂಭವಾಗಿದ್ದು, ಗ್ರೂಪ್‌ ಹಂತದ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಕರ್ನಾಟಕ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡದ ವಿರುದ್ಧ ಕಣಕ್ಕಿಳಿದಿದ್ದು ಮೊದಲು ಬ್ಯಾಟಿಂಗ್‌ ನಡೆಸಿ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 402 ರನ್‌ ಕಲೆಹಾಕಿ ಜಮ್ಮು ಕಾಶ್ಮೀರ ತಂಡಕ್ಕೆ ಗೆಲ್ಲಲು 403 ರನ್‌ಗಳ ಗುರಿಯನ್ನು ನೀಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್‌ ಮಾಡಿದೆ. ಕರ್ನಾಟಕದ ಪರ ಆರಂಭಿಕರಾಗಿ ಆರ್‌ ಸಮರ್ಥ್‌ ಹಾಗೂ ನಾಯಕ ಮಯಾಂಕ್‌ ಅಗರ್ವಾಲ್ ಕಣಕ್ಕಿಳಿದಿದ್ದಾರೆ. ಆರ್‌ ಸಮರ್ಥ್‌ 120 ಎಸೆತಗಳಲ್ಲಿ 123 ರನ್ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ 133 ಎಸೆತಗಳಲ್ಲಿ 157 ರನ್‌ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್‌ ಪಡಿಕ್ಕಲ್‌ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ ಅಜೇಯ 71 ರನ್‌ ಚಚ್ಚಿದರೆ, ಮನೀಶ್‌ ಪಾಂಡೆ 14 ಎಸೆತಗಳಲ್ಲಿ ಅಜೇಯ 23 ರನ್‌ ಬಾರಿಸಿದರು.

ಕರ್ನಾಟಕದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಎಲ್ಲಿಯೂ ಯಶಸ್ವಿಯಾದ ಜಮ್ಮು ಕಾಶ್ಮೀರ ಬೌಲರ್‌ಗಳು ಹೈರಾಣಾದರು. ರಶಿಖ್‌ ಸಲಾಂ ಹಾಗೂ ಸಾಹಿಲ್ ಲೋತ್ರ ತಲಾ ಒಂದೊಂದು ವಿಕೆಟ್‌ ಪಡೆದರೆ ಇನ್ನುಳಿದ ಯಾವುದೇ ಬೌಲರ್ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

andolana

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

10 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

11 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

12 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

15 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

15 hours ago