Mysore
33
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹತಾಶೆಯ ನಂತರ ರಾಜ್ಯ ಬಿಜೆಪಿ ವಲಯದಲ್ಲಿ ಚಟುವಟಿಕೆ ಜೋರಾಗಿದೆ. ಬೆಂಗಳೂರಿನ ಮಲ್ಲೇಶವರದಲ್ಲಿರುವ ಬಜೆಪಿ ಶಕ್ತಿ ಕೇಂದ್ರ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಿದ್ದರು. ನಿಕಟಪೂರ್ವ ರಾಜ್ಯಾಧ್ಯಕ್ಷ ನ ನಳಿನ್‌ ಕುಮಾರ್‌ ಕಟೀಲ್‌ ಅವರು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.

ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.

ಪ್ರಮುಖರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.

https://x.com/BJP4Karnataka/status/1724630485639299510?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!