ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹತಾಶೆಯ ನಂತರ ರಾಜ್ಯ ಬಿಜೆಪಿ ವಲಯದಲ್ಲಿ ಚಟುವಟಿಕೆ ಜೋರಾಗಿದೆ. ಬೆಂಗಳೂರಿನ ಮಲ್ಲೇಶವರದಲ್ಲಿರುವ ಬಜೆಪಿ ಶಕ್ತಿ ಕೇಂದ್ರ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಿದ್ದರು. ನಿಕಟಪೂರ್ವ ರಾಜ್ಯಾಧ್ಯಕ್ಷ ನ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.
ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.
ಪ್ರಮುಖರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…