Mysore
17
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಿಜ​ಯೇಂದ್ರ 40.000 ಅಂತರದಿಂದ ಗೆಲ್ತಾರೆ : ಯಡಿಯೂರಪ್ಪ

ಶಿಕಾರಿಪುರ : ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ ಅಂತ ತಿಳಿಸಿದ್ದಾರೆ.

ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!