ಇಂದು ( ನವೆಂಬರ್ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ ಅಬ್ಬರದ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಹೌದು ಏಕದಿನ ಕ್ರಿಕೆಟ್ ಮಾದರಿಯಲ್ಲಿ ತನ್ನ 50ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಅಮೋಘ ಇನ್ನಿಂಗ್ಸ್ ಮೂಲಕ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ದಾಖಲೆಗಳನ್ನು ಮುರಿದು ಹಾಕಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಏಕದಿನ ಶತಕಗಳನ್ನು ಬಾರಿಸಿದ ಕ್ರಿಕೆಟರ್ ಎಂಬ ದಾಖಲೆ ಹೊಂದಿದ್ರು. ವಿರಾಟ್ ಕೊಹ್ಲಿ 50ನೇ ಶತಕ ಬಾರಿಸುವ ಮೂಲಕ ಸಚಿನ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿಹಾಕಿದ್ದಾರೆ.
ಇನ್ನು ಈ ದಾಖಲೆ ಮಾತ್ರವಲ್ಲದೇ ಸಚಿನ್ ಹೆಸರಿನಲ್ಲಿದ್ದ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನೂ ಸಹ ವಿರಾಟ್ ಕೊಹ್ಲಿ ಮುರಿದಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್ 2003ರ ವಿಶ್ವಕಪ್ ಟೂರ್ನಿಯಲ್ಲಿ 673 ರನ್‌ಗಳನ್ನು ಬಾರಿಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದ ನಂತರ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ 711 ರನ್‌ಗಳನ್ನು ಗಳಿಸಿದ್ದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಅಲ್ಲದೇ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯಾದ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು 50+ ರನ್ ಅನ್ನೂ ಸಹ ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಈ 2003ರ ವಿಶ್ವಕಪ್ ಟೂರ್ನಿಯಲ್ಲಿ 7 ಬಾರಿ 50+ ಸ್ಕೋರ್ ಮಾಡಿದ್ದರು. ಆದರೆ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ 8ನೇ ಬಾರಿಗೆ 50+ ಸ್ಕೋರ್ ಮಾಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…