ದಿಲ್ಲಿಯಲ್ಲಿ ರೈತರ ಪ್ರತಿಭಟನೆ ಕುರಿತು ವಿರಾಟ್‌ ಕೊಹ್ಲಿ ಟ್ವೀಟ್‌

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʻಭಿನ್ನಭಿಪ್ರಾಯಗಳ ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರೋಣ. ರೈತರು ನಮ್ಮ ದೇಶದ ಅವಿಭಾಜ್ಯ ಅಂಗ. ಶಾಂತಿ ನೆಲೆಸಲು ಹಾಗೂ ಒಗ್ಗಟ್ಟಾಗಿ ಎಲ್ಲರೂ ಮುಂದುವರಿಯಲು ಎಲ್ಲ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ಸಿಗಲಿದೆ ಎಂಬುದರಲ್ಲಿ ನನಗೆ ಖಚಿತವಿದೆʼ ಎಂದು ಕೊಹ್ಲಿ ತಿಳಿಸಿದ್ದಾರೆ.

× Chat with us