BREAKING NEWS

ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣ: ಜಗನ್ ಚಿಕ್ಕಪ್ಪ ಭಾಸ್ಕರ ರೆಡ್ಡಿ ಬಂಧನ

ಕಡಪ: ‌ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ಸಹೋದರ ಮತ್ತು ಜಗನ್ ರೆಡ್ಡಿ ಅವರ ಚಿಕ್ಕಪ್ಪ ವಿವೇಕಾನಂದ ಅವರು ಆಂಧ್ರ ವಿಧಾನಸಭಾ ಚುನಾವಣೆ ಮುನ್ನ 2019ರ ಮಾರ್ಚ್ 15ರ ರಾತ್ರಿ ಪುಲಿವೆಂದುಲದಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು.

ಈ ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿತ್ತು. ಜುಲೈ 2020 ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ಕೊಲೆ ಪ್ರಕರಣದಲ್ಲಿ 2021ರ ಅಕ್ಟೋಬರ್ 26ರಂದು ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. 2022ರ ಜನವರಿ 31 ರಂದು ಪೂರಕ ಚಾರ್ಜ್‌ಶೀಟ್ ಅನ್ನು ಸಲ್ಲಿಸಲಾಗಿತ್ತು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

6 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

7 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago