BREAKING NEWS

ವಿಕಲಚೇತನ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ: ಪ್ರಕ್ರಿಯೆ ಹೇಗೆ.?

ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಪ್ರಕ್ರಿಯೆ: ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಹೇಗೆ?

ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ತ್‌ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ.

ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ.

ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.

ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ.

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು:  ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

11 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

11 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

11 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

11 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

12 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

12 hours ago