BREAKING NEWS

ನಾಳೆ ಮತದಾನ : ರಾಜ್ಯಾದ್ಯಂತ ಎಷ್ಟು ಮತಗಟ್ಟೆಗಳಿವೆ? ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲರ ಭವಿಷ್ಯವನ್ನು ನಾಳೆ ಮತದಾರ ಪ್ರಭು ಬರೆಯಲಿದ್ದಾನೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.

ಭದ್ರತೆಗಾಗಿ ಒಟ್ಟು 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ. 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆ ಸೇರಿದಂತೆ 8,500 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅವುಗಳಲ್ಲಿ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

lokesh

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago