ಲಾಕ್‌ಡೌನ್‌ನಿಂದ ವ್ಯಾಪಾರವಿಲ್ಲದೇ ತೊಂದರೆ… ಬೇಸತ್ತು ಕೂಲಿ ಕಾರ್ಮಿಕ ನೇಣಿಗೆ ಶರಣು

ಕೊಳ್ಳೇಗಾಲ: ಜೀವನದಲ್ಲಿ ಜಿಗುಪ್ಸೆಗೊಂಡ ಕೂಲಿಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಪಟ್ಟಣದಲ್ಲಿ ಜರುಗಿದೆ.

ಪಟ್ಟಣದ ಕಾವೇರಿ ರಸ್ತೆಯ ನಿವಾಸಿ, ಹಣ್ಣಿನ ವ್ಯಾಪಾರಿ ನಾಗರಾಜು(೫೨) ಮೃತ ವ್ಯಕ್ತಿ.

ಮದ್ಯ ವ್ಯಸನಿಯಾಗಿದ್ದ ನಾಗರಾಜು, ಲಾಕ್‌ಡೌನ್‌ನಲ್ಲಿ ವ್ಯಾಪಾರವಿಲ್ಲದೆ ತೊಂದರೆಗೆ ಸಿಲುಕಿದ್ದ. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಮನೆಯಲ್ಲಿ ನೇಣುಬಿಗಿದುಕೊಂಡು ಸಾವಿಗೀಡಾಗಿದ್ದಾನೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆದಿದ್ದು ಬಳಿಕ ಕುಟುಂಬದವರಿಗೆ ನೀಡಲಾಗಿದೆ.

× Chat with us