ಮೈಸೂರು : ಜನ ಸರ್ಕಾರ ಮಾಡಲು ನಮಗೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ನೀಡಿದ ಆಸ್ವಾಸನೆಗಳನ್ನು ರಾಜ್ಯದಲ್ಲಿ ಜಾರಿ ಮಾಡಿದ್ದೇವೆ. ಶಾಂತಿಯುತ ವಾತಾವರಣ ನಿರ್ಮಾಣ ಮಾಡಿ, ದ್ವೇಷದ ರಾಜಕಾರಣ ನಿರ್ಮೂಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಮೊದಲ ಕೆಲಸ ಎಂದು ಹೇಳಿರುವ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ, ಅದಕ್ಕೆಲ್ಲಾ ಉತ್ತರ ಕೊಡಬೇಕಾಗಿಲ್ಲ, ಅಸೆಂಬ್ಲಿಯಲ್ಲಿ ಉತ್ತರ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಜನರು ಈಗ ಬಿಜೆಪಿಯವರಿಗೆ ಪಾಠ ಕಲಿಸಿ, ವಿರೋಧ ಪಕ್ಷದಲ್ಲಿ 5 ವರ್ಷ ಕೂರಿಸಿದ್ದಾರೆ. ಅಧಿಕಾರಕ್ಕೆ ಬಂದೇಬಿಡ್ತೀವಿ ಅಂದುಕೊಂಡಿದ್ರು. ಆದ್ರೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದ್ಬಿಟ್ರಲ್ಲ ಹಾಗಾಗಿ ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಕೌರವ ಸಂಸ್ಕೃತಿಯ ರಾಜಕಾರಣ ನಡೆಸುವುದು ಬೇಡ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಯಿಸಿ ಕುಮಾರಸ್ವಾ,ಮಿ ಎಂದಾದರು ತಾವು ಮಾಡಿರುವ ಆರೋಪಗಳನ್ನು ಸಾಬೀತು ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಹೊಟ್ಟೆಉರಿ, ಹೊಟ್ಟೆಕಿಚ್ಚು, ಅಸೂಯೆ, ದ್ವೇಷ ಅಷ್ಟೇ ಅವರು ಕೇವಲ 19 ಸೀಟ್ ಗೆಲ್ಲುವ ಮೂಲಕ ಹತಾಶರಾಗಿದ್ದಾರೆ ಎಂದು ವ್ಯಂಗವಾಡಿದರು.
ಯತೀಂದ್ರ ಸಿದ್ದರಾಮಯ್ಯ ಸೇರಿ ಯಾರನ್ನಾದರೂ ಟಾರ್ಗೆಟ್ ಮಾಡಲಿ, ನಮಗೆ ಜನರು ಆಶೀರ್ವಾದ ಮಾಡಿದ್ದಾರೆ, ನಾವು ಸರ್ಕಾರ ನಡೆಸುತ್ತೇವೆ ಎಂದರು.
ಪೆನ್ ಡ್ರೈವ್ ಕುರಿತು ಮಾತನಾಡಿ, ಕುಮಾರಸ್ವಾಮಿ ಮಾಜಿ ಸಿಎಂ ಆಗಿ ವಿದ್ಯುತ್ ಕದ್ದಿರುವವರ ಪ್ರಶ್ನೆಯನ್ನು ಏಕೆ ಕೇಳುತ್ತೀರಿ, ಇನ್ನೊಬ್ಬರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.
62 ಸಾವಿರ ದಂಡ ಕಟ್ಟಿರುವುದು ನಾನು ಅಪರಾಧ ಮಾಡಿದ್ದೇನೆ ಎಂದು, ಅದು ಸಣ್ಣದೇ ಆಗಿರಲಿ ದೊಡ್ಡದೇ ಆಗಿರಲಿ ಅದೊಂದು ಅಪರಾಧವೇ ಎಂದು ಕುಟುಕಿದರು.
ಈಗ ಚುನಾವಣೆ ನಡೆದರೆ ನಾವು ಗೆಲ್ಲುತ್ತೇವೆ ಎಂಬ ಬಿಎಸ್‌ವೈ ಹೇಳಿಕೆಗೆ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣುತ್ತಿದ್ದಾರೆ. ಆದರೆ ಜನರು ಅವರನ್ನು 60ಕ್ಕೆ ನಿಲ್ಲಿಸಿದ್ದಾರೆ. ಯತ್ನಾಳ್, ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಸಭೆಯಿಂದ ಹೊರ ನಡೆದಿದ್ದಾರೆ. ಮುಂದಿನ ಬಿಜೆಪಿ ಬೆಳವಣಿಗೆಯನ್ನು ಕಾದು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…