BREAKING NEWS

ಬಿಜೆಪಿಯ ಮುಂದಿನ ಬೆಳವಣಿಗೆಯನ್ನು ಕಾದು ನೋಡಿ: ಸಿಎಂ ಸಿದ್ದರಾಮಯ್ಯ

ಮೈಸೂರು : ಜನ ಸರ್ಕಾರ ಮಾಡಲು ನಮಗೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ನೀಡಿದ ಆಸ್ವಾಸನೆಗಳನ್ನು ರಾಜ್ಯದಲ್ಲಿ  ಜಾರಿ ಮಾಡಿದ್ದೇವೆ. ಶಾಂತಿಯುತ ವಾತಾವರಣ ನಿರ್ಮಾಣ ಮಾಡಿ, ದ್ವೇಷದ ರಾಜಕಾರಣ ನಿರ್ಮೂಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭ್ರಷ್ಟಾಚಾರ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಮೊದಲ ಕೆಲಸ ಎಂದು ಹೇಳಿರುವ ವಿಪಕ್ಷ ನಾಯಕ ಅಶೋಕ್‌ ಹೇಳಿಕೆಗೆ, ಅದಕ್ಕೆಲ್ಲಾ ಉತ್ತರ ಕೊಡಬೇಕಾಗಿಲ್ಲ, ಅಸೆಂಬ್ಲಿಯಲ್ಲಿ ಉತ್ತರ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಜನರು ಈಗ ಬಿಜೆಪಿಯವರಿಗೆ ಪಾಠ ಕಲಿಸಿ, ವಿರೋಧ ಪಕ್ಷದಲ್ಲಿ 5 ವರ್ಷ ಕೂರಿಸಿದ್ದಾರೆ. ಅಧಿಕಾರಕ್ಕೆ ಬಂದೇಬಿಡ್ತೀವಿ ಅಂದುಕೊಂಡಿದ್ರು. ಆದ್ರೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತಂದ್ಬಿಟ್ರಲ್ಲ ಹಾಗಾಗಿ ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಕೌರವ ಸಂಸ್ಕೃತಿಯ ರಾಜಕಾರಣ ನಡೆಸುವುದು ಬೇಡ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಯಿಸಿ ಕುಮಾರಸ್ವಾ,ಮಿ ಎಂದಾದರು ತಾವು ಮಾಡಿರುವ ಆರೋಪಗಳನ್ನು ಸಾಬೀತು ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.  ಹೊಟ್ಟೆಉರಿ, ಹೊಟ್ಟೆಕಿಚ್ಚು, ಅಸೂಯೆ, ದ್ವೇಷ ಅಷ್ಟೇ ಅವರು ಕೇವಲ 19 ಸೀಟ್‌ ಗೆಲ್ಲುವ ಮೂಲಕ ಹತಾಶರಾಗಿದ್ದಾರೆ ಎಂದು ವ್ಯಂಗವಾಡಿದರು.

ಯತೀಂದ್ರ ಸಿದ್ದರಾಮಯ್ಯ ಸೇರಿ ಯಾರನ್ನಾದರೂ ಟಾರ್ಗೆಟ್‌ ಮಾಡಲಿ, ನಮಗೆ ಜನರು ಆಶೀರ್ವಾದ ಮಾಡಿದ್ದಾರೆ, ನಾವು ಸರ್ಕಾರ ನಡೆಸುತ್ತೇವೆ ಎಂದರು.

ಪೆನ್‌ ಡ್ರೈವ್‌ ಕುರಿತು ಮಾತನಾಡಿ, ಕುಮಾರಸ್ವಾಮಿ ಮಾಜಿ ಸಿಎಂ ಆಗಿ ವಿದ್ಯುತ್‌ ಕದ್ದಿರುವವರ ಪ್ರಶ್ನೆಯನ್ನು ಏಕೆ ಕೇಳುತ್ತೀರಿ, ಇನ್ನೊಬ್ಬರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.

62 ಸಾವಿರ ದಂಡ ಕಟ್ಟಿರುವುದು ನಾನು ಅಪರಾಧ ಮಾಡಿದ್ದೇನೆ ಎಂದು, ಅದು ಸಣ್ಣದೇ ಆಗಿರಲಿ ದೊಡ್ಡದೇ ಆಗಿರಲಿ ಅದೊಂದು ಅಪರಾಧವೇ ಎಂದು ಕುಟುಕಿದರು.

ಈಗ ಚುನಾವಣೆ ನಡೆದರೆ ನಾವು ಗೆಲ್ಲುತ್ತೇವೆ ಎಂಬ ಬಿಎಸ್‌ವೈ ಹೇಳಿಕೆಗೆ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣುತ್ತಿದ್ದಾರೆ. ಆದರೆ ಜನರು ಅವರನ್ನು 60ಕ್ಕೆ ನಿಲ್ಲಿಸಿದ್ದಾರೆ. ಯತ್ನಾಳ್‌, ರಮೇಶ್‌ ಜಾರಕಿಹೊಳಿ ಅವರು ವಿಜಯೇಂದ್ರ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಸಭೆಯಿಂದ ಹೊರ ನಡೆದಿದ್ದಾರೆ. ಮುಂದಿನ ಬಿಜೆಪಿ ಬೆಳವಣಿಗೆಯನ್ನು ಕಾದು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

5 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

5 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

6 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

10 hours ago