ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣ ಏರಿಕೆ: ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಕರ್ನಾಟಕಕ್ಕೂ ಅಪಾಯ ಇದೆ ಎಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಸಮಿತಿ ಸಲಹೆ ನೀಡಿದೆ. ನೈಟ್ ಕರ್ಪ್ಯೂ ಅವಧಿಯನ್ನು ಸಂಜೆ 7ರಿಂದ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಬೇಕು. ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಬೇಕು. ಎಲ್ಲಾ ಸಂಸ್ಥೆಗಳಲ್ಲಿ ಶೇ. 50 ಸಿಬ್ಬಂದಿಯೊಂದಿಗೆ ಕೆಲಸ ನಿರ್ವಹಿಸಲು ಆದೇಶಿಸಬೇಕು ಎಂದು ಸೂಚಿಸಿದೆ.

ರಾಜ್ಯದಲ್ಲಿ ದಿನೇ ದಿನೆ ಕೋವಿಡ್‌ ಪ್ರರಕಣಗಳು ಏರುತ್ತಿರುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

× Chat with us