ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.
ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.
ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ.
ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…