BREAKING NEWS

100 ಅಡಿಯ ಗಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.

ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ.

ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.

lokesh

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

8 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago