Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ : ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.

ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ