ತುಮಕೂರು : ಕಾಂಗ್ರೆಸ್ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ ಆಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಹೌದು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ವಿಚಾರದಲ್ಲಿ ನಾನು ಹಲವು ಬಾರಿ ಸೋತಿದ್ದೇನೆ. ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿದ್ದೇನೆ. ಈಗ ಸಿದ್ದರಾಮಯ್ಯನವರು ನನಗೆ ಸಹಕರಿಸುವ ವಿಶ್ವಾಸವಿದೆ. ಆರಂಭದಲ್ಲಿ ಮಂತ್ರಿ ಮಾಡದಿದ್ದಾಗ ತಾಳ್ಮೆಯಿಂದ ಇರಲಿಲ್ವಾ. ಆವಾಗ ನಾನು ಸಿದ್ದರಾಮಯ್ಯನವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರು ಸಹಕರಿಸಬೇಕೆಂದು ಹೇಳಿದ್ದಾರೆ.
ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಡಸಿದ್ದೇಶ್ವರ ಮಠ ನಮಗೆ ಪುಣ್ಯ ಕ್ಷೇತ್ರ. ಪ್ರತಿ ಸಂದರ್ಭದಲ್ಲೂ ಶ್ರೀಗಳು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ತೀರ್ಮಾನವನ್ನು ಇಲ್ಲೇ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಮಾರ್ಗದರ್ಶನ ಕೊಟ್ಟಿದ್ದಾರೆ. ಇನ್ಕಮ್ ಟ್ಯಾಕ್ಸ್, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವರು ಎಂದು ತಿಳಿಸಿದರು.
ನಾನು 134 ಕ್ಷೇತ್ರದಲ್ಲಿ ಗೆಲ್ಲಿಸು ಅಂತ ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡಬಾರದು ಅಂತ ಬೇಡಿಕೊಂಡಿದ್ದೆ. ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎನ್ನುವ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮಿ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದ್ವಿ ಎಂದು ಮಾಹಿತಿ ನೀಡಿದರು.
ಅಜ್ಜಯ್ಯ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುವ ನಂಬಿಕೆ ಇದೆ. ದಿನೇಶ್ ಗುಂಡೂರಾವ್ ಅವರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ತಿಳಿಸಿದ್ದಾರೆ.
ಚೆಲುವರಾಯಸ್ವಾಮಿ ಇಲ್ಲಿ ಬಂದಿದ್ದಾರೆ. ಅವರಿಗೆ ಒಂದು ಆತಂಕ ಇತ್ತು. ಮಂಡ್ಯದಲ್ಲಿ ಏನಾಗುತ್ತೋ ಏನೋ ಅನ್ನೋ ಆತಂಕ ಇತ್ತು. ಅವರಿಗೇ ಕೂಡ ಧೈರ್ಯ ತುಂಬಿದೆ. ಈಗ ಮಂಡ್ಯದಲ್ಲಿ ಕಾಂಗ್ರೆಸ್ಗೆ ಗೆಲುವಾಗಿದೆ. ಇದು ಮಂಡ್ಯ ಜನತೆಯ ಗೆಲುವು. ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ. ಇಲ್ಲಿಗೆ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಬಂದಿದ್ದಾರೆ. ಇದು ಪ್ಲ್ಯಾನ್ ಅಲ್ಲ ಎಂದರು.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…