ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.
ಯದುವೀರ್ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.
ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…