BREAKING NEWS

ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುತ್ತೇವೆ : ಕೆಎಸ್‍ಆರ್ ಟಿಸಿ

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ.

ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು 1.45 ಗಂಟೆಯಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯು ಬಸ್ಸಿನ ಬಲಭಾಗದ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದು ಅಪಘಾತವಾಗಿದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಕಟಣೆಯಲ್ಲಿ ಕೆಎಸ್‍ಆರ್ ಟಿಸಿ ಹೇಳಿದೆ.

ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಎಂಬುವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹಾಗೂ ಹುಲ್ಲಹಳ್ಳಿ ನಿವಾಸಿ ರಾಜಮ್ಮ (50) ಅವರ ಬಲಗೈಗೆ ತೀವ್ರ ಪೆಟ್ಟಾಗಿದೆ. ನಿಗಮದ ಅಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‍ಐ.ಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಲ್ಲ ಎಂದು ಕೆಎಸ್‍ಆರ್ ಟಿಸಿ ಸ್ಪಷ್ಟಪಡಿಸಿದೆ.

lokesh

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

56 mins ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

59 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

1 hour ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

1 hour ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

1 hour ago