BREAKING NEWS

ಬೇರೆ-ಬೇರೆ ಪಕ್ಷದಲ್ಲಿದ್ದೂ ನಮ್ಮಲ್ಲಿ ಯಾವುದೇ ವೈರತ್ವವಿಲ್ಲ: ಸಂಸದ ಶ್ರೀನಿವಾಸ್‌ ಪ್ರಸಾದ್‌

ಮೈಸೂರು: ನಾನು, ಎಚ್‌.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.

ನಗರದಲ್ಲಿಂದು  ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್‌ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಎಚ್‌.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್‌ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್‌, ಗಣೇಶ್‌ ಪ್ರಸಾದ್‌ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್‌, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್‌ ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

57 mins ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

2 hours ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

3 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

6 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

6 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

6 hours ago